ಬೆಂಗಳೂರು : ಮುಂದಿನ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, ಇಂದು ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಮುಂದಿನ ನಾಲ್ಕು ದಿನ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.