spot_img
spot_img
spot_img
18.7 C
Belagavi
Monday, September 26, 2022
spot_img

ಅಕ್ಕ- ತಮ್ಮ, ಅಕ್ಕ- ಪಕ್ಕ : ಕರ್ನಾಟಕದ ಇತಿಹಾಸದಲ್ಲೇ ಮೊದಲು 

spot_img
spot_img

For Breaking News Download App

ವರದಿ : ರತ್ನಾಕರ್ ಗೌಂಡಿ

ಬೆಂಗಳೂರು :ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಆರಂಭವಾಗಿರುವ ವಿಧಾನಸಭೆ ಅಧಿವೇಶನದ ಮೊದಲ ದಿನ ನಡೆದ ಜಂಟಿ ಅಧಿವೇಶನದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಒಟ್ಟಿಗೇ ಕುಳಿತು ಕಾರ್ಯಕಲಾಪದಲ್ಲಿ ಭಾಗಿಯಾದರು.

ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಮೊದಲು ಎನ್ನಲಾದ ಈ ಅಪರೂಪದ ವಿದ್ಯಮಾನಕ್ಕೆ ರಾಜ್ಯ ಸಾಕ್ಷಿಯಾಯಿತು. ಲಕ್ಷ್ಮಿ ಹೆಬ್ಬಾಳಕರ್ ಪ್ರಸ್ತುತ ವಿಧಾನಸಭೆಯ ಶಾಸಕರಾಗಿ ಕಳೆದ 4 ವರ್ಷದಿಂದ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಬೆಳಗಾವಿ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

ಅವರು ಇದೇ ಮೊದಲ ಬಾರಿಗೆ ವಿಧಾನ ಮಂಡಳದ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ಸೋಮವಾರ ಮೊದಲ ದಿನ ರಾಜ್ಯಪಾಲರ ಭಾಷಣವಿದ್ದುದರಿಂದ ಜಂಟಿ ಅಧಿವೇಶನ ನಡೆಸಲಾಯಿತು. ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಅಕ್ಕ- ಪಕ್ಕ ಕುಳಿತು ಕಲಾಪದಲ್ಲಿ ಪಾಲ್ಗೊಂಡರು.

“ಸಣ್ಣ ವಯಸ್ಸಿನಲ್ಲೇ ಹಿರಿಯರ ಮನೆಯ ಸದಸ್ಯನಾಗಿ ಅಧಿವೇಶನದಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಅದರಲ್ಲೂ ಅಕ್ಕನ ಮಾರ್ಗದರ್ಶನದಲ್ಲಿ, ಅವಳ ಜೊತೆಗೇ ಕುಳಿತು ಮೊದಲ ದಿನ ಕಲಾಪದಲ್ಲಿ ಭಾಗಿಯಾಗಿರುವುದು ಎಂದಿಗೂ ಮರೆಯಲಾರದ ಕ್ಷಣವಾಗಿದೆ. ತನ್ಮೂಲಕ ವಿಧಾನ ಪರಿಷತ್ ಸದಸ್ಯನಾಗಿ ನನ್ನ ಜೀವನದ ಮಧುರ ಕ್ಷಣ ಇತಿಹಾಸ ನಿರ್ಮಿಸುವ ಮೂಲಕವೇ ಆರಂಭವಾಗಿರುವುದು ಮತ್ತಷ್ಟು ಸಂತಸ ತಂದಿದೆ ” ಎಂದು ಚನ್ನರಾಜ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -