spot_img
spot_img
spot_img
18 C
Belagavi
Thursday, September 29, 2022
spot_img

ಸರ್ವವ್ಯಾಪಿ ಸರ್ವಸ್ಪರ್ಷ ಬಜೆಟ್ : ಶಾಸಕ ಅನಿಲ ಬೆನಕೆ

spot_img

ಬೆಳಗಾವಿ : ಮೊದಲ ಬಜೆಟ್’ನ್ನು ಮಂಡಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ರಾಜ್ಯದ ಎಲ್ಲ ಸಮುದಾಯಗಳ ಹಾಗೂ ಎಲ್ಲ ನಾಗರಿಕರ ಹಿತರಕ್ಷಣೆಯನ್ನು ಕಾಪಾಡಿಕೊಂಡು ಜನರಿಂದ ಜನರಿಗಾಗಿ ಜನರಿಗೋಸ್ಕರವಾದ ಮತ್ತು ಸರ್ವವ್ಯಾಪಿ ಸರ್ವಸ್ಪರ್ಷ ಬಜೆಟನ್ನು ಇಂದು ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ ಎಂದು ಶಾಸಕ ಅನಿಲ ಬೆನಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಜೆಟ್‍ನಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳ ಅಭಿವೃಧ್ದಿಗೆ ವಿಶೇಷ ಅನುದಾನ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಮೋ ಕ್ಲಿನಿಕ್ ಸ್ಥಾಪನೆ ಹಾಗೂ ಪ್ರಮುಖವಾಗಿ ಗೋ ರಕ್ಷಣೆಗೆ ಗೋ ಶಾಲೆಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಮಹಿಳೆಯರನ್ನು ಸ್ವಾಲಂಭಿಯಾಗಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ವಿಶೇಷ ಅನುದಾನವನ್ನು ಒದಗಿಸಿರುವುದು ಸಂತೋಷದ ಸಂಗತಿಯಾಗಿದ್ದು, ಲಿಂಗಾಯತ ಅಭಿವೃಧ್ದಿ ನಿಗಮಕ್ಕೆ 100 ಕೋಟಿ ಹಾಗೂ ಮರಾಠಾ ಅಭಿವೃಧ್ದಿ ನಿಗಮಕ್ಕೆ 50 ಕೊಟಿ ಮತ್ತು ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮಕ್ಕೆ 50 ಕೋಟಿ ಹೀಗೆ ಎಲ್ಲ ಸಮುದಾಯಗಳ ಅಭಿವೃಧ್ದಿಗೆ ಪೂರಕವಾದ ಮತ್ತು ತೃಪ್ತಿಕರವಾದ ಬಜೆಟ್ ಇದಾಗಿದೆ ಎಂದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -