spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

ಬೆಂಗಳೂರು: ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ

ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದರು.

 

 

ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

63 ಲಕ್ಷ ಮಂದಿ ಖಾತೆಗೆ ಹಣ ಜಮಾ:

ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ಹಂಚಿಕೊಂಡರು. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದರು. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ.ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವರು ತಿಳಿಸಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -