ಬೆಳಗಾವಿ: ಜಿಲ್ಲೆಯಲ್ಲಿ ಕಿಡಿಗೇಡಿಗಳು ಕೃತ್ಯಯೊಂದು ನಡೆದಿದೆ. ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಕಟ್ಟಿದಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿರುವಂತ ಮಸೀದಿಯ ಮೇಲೆ ಕಿಡಿಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿ ಅಟ್ಟಹಾಸ ಮೆರೆದಿದ್ದಾರೆ.
ಕೇಸರಿ ಧ್ವಜ ಕಟ್ಟಿದ್ದರಿಂದ ಇಂದು ಮುಂಜಾನೆ ಬಿಗುವಿನ ವಾತಾವರಣ ಕೂಡ ಉಂಟಾಗಿತ್ತು. ಪೊಲೀಸರ ಮದ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದ್ದು, ಮಸೀದಿಗೆ ಕಟ್ಟಲಾಗಿದ್ದಂತ ಕೇಸರಿ ಧ್ವಜನವನ್ನು ಕೆಳಗೆ ಇಳಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.