ಬಳ್ಳಾರಿ: ಮುಡಾ ಹಗರಣದ ಆರೋಪ ಹಾಗೂ ಬಿಜೆಪಿ- ಜೆಡಿಎಸ್ ಪಾದಯಾತ್ರೆಯಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದ್ರಾ? ಹೀಗೊಂದು ಪ್ರಶ್ನೆ ಈಗ ಎದ್ದಿದೆ.
ನಿಗದಿಯಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ದಿಢೀರ್ ರದ್ದು ಮಾಡಿದ್ದರಿಂದ ಈ ಪ್ರಶ್ನೆ ಎದ್ದಿದೆ.
ಮಂಗಳವಾರ ಕೊಪ್ಪಳ ಹಾಗೂ ವಿಜಯನಗರದಲ್ಲಿ ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು. ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆಸಿಎಂ ಬಾಗಿನ ಅರ್ಪಿಸಬೇಕಿತ್ತು.
ಈ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ.
ತಾತ್ಕಾಲಿಕವಾಗಿ ಸಿಎಂ ಕಾರ್ಯಕ್ರಮ ಮುಂದೂಡಿಕೆಯಾದ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.