spot_img
spot_img
spot_img
18.5 C
Belagavi
Thursday, September 29, 2022
spot_img

ಕೊರೊನಾ ಸಂಕಷ್ಟದಲ್ಲಿ ಆರೋಗ್ಯ ಸಿಬ್ಬಂದಿಯ ಸೇವೆ ಶ್ಲಾಘನೀಯ: ಡಿಸಿ ಹಿರೇಮಠ

spot_img

ಬೆಳಗಾವಿ: ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ತೋರಿದ ಸೇವಾನಿಷ್ಠೆಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶ್ಲಾಘಿಸಿರು. ಕುಟುಂಬ ಕಲ್ಯಾಣ ಯೋಜನೆಯಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳ ಕುರಿತು ಆರೋಗ್ಯ ಇಲಾಖೆಯ ವೈದ್ಯರಿಗೆ ಹಾಗೂ ಇಲಾಖೆಯ ಸಿಬ್ಬಂದಿಗೆೆ ಸುವರ್ಣಸೌಧದಲ್ಲಿ ಏರ್ಪಡಿಸಿದ್ದ ಒಂದು ದಿನದ ತರಬೇತಿಯ ಕರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಎಸ ವಿ ಮುನ್ಯಾಳ ಮಾತನಾಡಿ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಅನೇಕ ಹೊಸ ಯೋಜನೆಗಳು ಬಂದಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಅರ್ಹ ಪಲಾನುಭವಿಗಳಿಗೆ ಮುಟ್ಟಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಡಾ ಸರೋಜ ತಿಗಡಿ ಅವರು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪರಿಚಯಿಸಿದರು. ಜೀವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮತ್ತು ಕಾಯಕಲ್ಪದ ಕುರಿತು ಡಾ ಶಿವಲೀಲಾ ಶಿರೋಳ, ತಂತ್ರಂಶದಲ್ಲಿ ಕುಟುಂಬ ಯೋಜನೆಯ ವಿಧಾನಗಳನ್ನು ಅಳವಡಿಸುವ ರೀತಿ ಕುರಿತು ಮಾಲಿಂಗಾ ದಾಸ್ತಿಕೊಪ್ಪ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಉತ್ತಮ ಸೇವೆಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಎಂ.ವ್ಹಿ ಕಿವಡಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಸವರಾಜ ಯಲಿಗಾರ ಕಾರ್ಯಕ್ರಮವನ್ನು ನಿರುಪಿಸಿದರು ಸಾಂಖಿಕ ಅಧಿಕಾರಿಗಳಾದ ಸುವರ್ಣ ಐಹೊಳೆ ವಂದಿಸಿದರು.

ಕಾರ್ಯಗಾರದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ ಸರಸ್ವತಿ, ಜಿಲ್ಲಾ ಕುಷ್ಠರೋಗ ಅಧಿಕಾರಿಗಳಾದ ಡಾ ಚಾಂದನಿ, ಜಿಲ್ಲಾ ಕ್ಷಯರೋಗ ಅಧಿಕಾರಿಗಳಾದ ಡಾ ಅನಿಲ ಕುರಬು ಹಾಗೂ ಇನ್ನೀತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -