ಬೆಂಗಳೂರು: ಉಚಿತ ಯೋಜನೆಗಳನ್ನು ಜಾರಿಗೆ ತರುವ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ
ಸಿದ್ದರಾಮಯ್ಯನವರೇ ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ.
ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ?
ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ. ಉಚಿತ.. ಉಚಿತ.. ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ ಎಂಬುದು ತಿಂಗಳು ಕಳೆಯುವಷ್ಟರಲ್ಲೇ ಅರಿವಾಗಿದೆ ಎಂದು ಕುಟುಕಿದ್ದಾರೆ.