spot_img
spot_img
spot_img
25.1 C
Belagavi
Wednesday, May 31, 2023
spot_img

ನೋಟು ಬ್ಯಾನ್ ಸಿಂಧುತ್ವವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ 

ನವದೆಹಲಿ: 500 ಮತ್ತು 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಸಿಂಧುತ್ವವವನ್ನು ಎತ್ತಿಹಿಡಿದಿದೆ. ಇಂತಹ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ. ಇದು ಆರ್. ಬಿಐ ಮತ್ತು ಸರ್ಕಾರದ ನಡುವಿನ ವಿಷಯ. ನಿರ್ಧಾರವನ್ನು ಸಂಸತ್ ತೆಗೆದುಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

2016 ರಲ್ಲಿ ನೋಟು ಅಮಾನ್ಯೀಕರಣದ ಬಗ್ಗೆ ಕೇಂದ್ರ ಸರ್ಕಾರದ ಅಧಿಸೂಚನೆಯ ವಿರುದ್ಧ ನ್ಯಾಯಾಲಯದಲ್ಲಿ 50 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.

ಡಿಸೆಂಬರ್ 7 ರಂದು, ನ್ಯಾಯಪೀಠವು ಸರ್ಕಾರ ಮತ್ತು ಅರ್ಜಿದಾರರ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ನೋಟು ಅಮಾನನೀಕರಣ ನಿರ್ಧಾರವು ನಿರಂಕುಶ, ಅಸಾಂವಿಧಾನಿಕ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಯಡಿ ಸೂಚಿಸಲಾದ ಅಧಿಕಾರಗಳ ದುರುಪಯೋಗವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -