ಬೆಳಗಾವಿ : ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಮಸಿ ಬಳಿದಿದ್ದಾರೆ.
ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.
ಮಹಾರಾಷ್ಟ್ರದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು.