spot_img
spot_img
spot_img
34.1 C
Belagavi
Monday, May 29, 2023
spot_img

ಕಾಡಾನೆ ದಾಳಿಗೆ ಮಹಿಳೆ ಬಲಿ : ಸ್ಥಳಕ್ಕೆ ಬಂದ ಶಾಸಕನ ಅಂಗಿ ಹರಿದ ಗ್ರಾಮಸ್ಥರು ; ಆರೋಪ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು, ಸ್ಥಳಕ್ಕೆ ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ಗ್ರಾಮಕ್ಕೆ ಬಂದಿದ್ದಾರೆ.

ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರನ್ನು ಹಿಡಿದು ಎಳೆದಾಡಿದ್ದಾರೆ.

ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಲಾಠಿ ಚಾರ್ಜ್ ಮಾಡಿ ಶಾಸಕರನ್ನು ಕರೆದುಕೊಂಡು ಬಂದ ಕಾರಿನಲ್ಲಿ ಕೂಡಿಸಿದ್ದಾರೆ. ಈ ಸಂದರ್ಭದಲ್ಲಿ ಎಂ.ಪಿ. ಕುಮಾರಸ್ವಾಮಿ ಅವರ ಬಟ್ಟೆ ಹರಿದಿಲ್ಲ.

ಆದ್ರೆ, ಕುಮಾರಸ್ವಾಮಿ ಅವರು ಈ ಘಟನೆ ಬಗ್ಗೆ ವಿಡಿಯೋ ಹೇಳಿಕೆಯೊಂದನ್ನು ನೀಡಿದ್ದು, ಆ ವಿಡಿಯೋದಲ್ಲಿ ಶಾಸಕರ ಶರ್ಟ್ ಹರಿದಿದೆ. ಅಲ್ಲದೇ ಇದೊಂದು ವ್ಯವಸ್ಥಿತ ಪಿತೂರಿ ಎಂದು ಕುಮಾರಸ್ವಾಮಿ ವಿಡಿಯೋದಲ್ಲಿ ಆರೋಪಸಿದ್ದಾರೆ.

Related News

ಒಳ್ಳೆಯ ದಿನಗಳು ಬರುತ್ತವೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆ ಆಗಿಲ್ಲ: ಲಕ್ಷ್ಮಣ ಸವದಿ

ಚಿಕ್ಕೋಡಿ: ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಪ್ರತಿಕ್ರಿಯೆ...

ಜುಲೈನಲ್ಲಿ ಚಂದ್ರಯಾನ-3 ಉಡಾವಣೆ: ಎಸ್ ಸೋಮನಾಥ್

ಈ ವರ್ಷ ಜುಲೈನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್ ಸೋಮನಾಥ್ ಸೋಮವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಅವರ ಬಾಹ್ಯಾಕಾಶ ಕೇಂದ್ರದಿಂದ ಎರಡನೇ ಜನರೇಷನ್ನ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -