spot_img
spot_img
spot_img
21.1 C
Belagavi
Friday, September 30, 2022
spot_img

ಮಾಧ್ಯಮ ಪ್ರಜಾಪ್ರಭುತ್ವದ ಕಾವಲು ನಾಯಿ : ಪ್ರಾಧ್ಯಾಪಕ ಬಿ.ಸಿ. ಹೆಬ್ಬಾಳ

spot_img

ಬೆಳಗಾವಿ : ಸಮಾಜದಲ್ಲಿ ನಮ್ಮ ನಡೆ-ನುಡಿಗಳನ್ನು ರೂಪಿಸುವಲ್ಲಿ ಮಾಧ್ಯಮದ ಪಾತ್ರ ಬಹುಮುಖ್ಯವಾದುದು ಆದ್ದರಿಂದ ಮಾಧ್ಯಮವು ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ, ಸಂವಿಧಾನದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಮೂಡಲಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಬಿ.ಸಿ. ಹೆಬ್ಬಾಳ ತಿಳಿಸಿದರು.

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡ ಸಮಾಜ ಮತ್ತು ಮಾಧ್ಯಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸಮಾಜದ ಜನತೆಯನ್ನು,ರಾಷ್ಟ್ರವನ್ನು ಮುನ್ನಡೆಸುವ ಅಂಶಗಳನ್ನು ಒಳಗೊಂಡಿರಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ॥ ಆರ್.ಬಿ ಕೊಕಟನೂರ ವಹಿಸಿ ಮಾತನಾಡಿ ಸಕಾಲಕ್ಕೆ ಸರಿಯಾದ ಸುದ್ದಿಯನ್ನು ಸಮಗ್ರವಾಗಿ ಜನರಿಗೆ ಒದಗಿಸುವುದು ಮಾಧ್ಯಮಗಳ ಜವಾಬ್ದಾರಿಯಾಗಿದೆ. ಪತ್ರಿಕಾ ಧರ್ಮವನ್ನು ಪಾಲಿಸಿ ನೀವು ಬಾವಿ ಪತ್ರಕರ್ತರಾಗಿ ಸಮಾಜಕ್ಕೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಗೆಜೆಟೆಡ್ ಮ್ಯಾನೇಜರ್ ಅರುಣ ಸಕಟ, ಸುಪಿರಿಡೆಂಟ್ ರಾಜು ಹುದ್ದಾರ, ಉಪನ್ಯಾಸಕರಾದ ಗಿರೀಶ ಚವ್ಹಾಣ, ಸಂಜೀವ ಹಾದಿಮನಿ, ವಿಜಯಕುಮಾರ ಕಟ್ಟಿಮನಿ, ಶಿವು ನಾವಿ, ಸೈಯದ್ ಜಮಾದಾರ, ಸಂಗಮೇಶ ದಡ್ಡಿಮನಿ, ಅಪ್ಪು ಮಾದರ, ಪ್ರಕಾಶ ಅಂಬಲಿ, ಉಮೇಶ ಸೊಲ್ಲಾಪುರೆ, ಉಮೇಶ ಕಾಂಬ್ಳೆ, ಎನ್.ಕೆ.ಕುಲಕರ್ಣಿ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರವೀಣ ಅಂಗಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಕಾವೇರಿ ಕಣಕಿಕೊಡಿ ನಿರೂಪಿಸಿದರು. ಶ್ವೇತಾ ದಳವಾಯಿ ವಂದಿಸಿದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -