spot_img
spot_img
spot_img
18 C
Belagavi
Thursday, September 29, 2022
spot_img

ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ, ಕೇವಲ ಏಕ್ ಮತ : ಕೇಂದ್ರ ಸಚಿವ ಜೋಶಿ 

spot_img

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಮತ ಇಲ್ಲ, ಕೇವಲ ಏಕ್ ಮತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾನು ಬೆಳಗಾವಿಯಲ್ಲಿ ಚುನಾವಣೆ ವಿಷಯ ಕುರಿತು ಸಭೆ ನಡೆಸಲು ಬಂದಿದ್ದೇನೆ‌. ಬೆಳಗಾವಿ ಬಿಜೆಪಿ ನಾಯಕರಲ್ಲಿ ಭಿನ್ನಮತ ಇಲ್ಲವೇ ಇಲ್ಲ ಎಂದರು.

ಮುಂದುವರಿದು ಮಾತನಾಡಿ ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಬೊಮ್ಮಾಯಿ‌ ಅವರಿಗೆ ಬಿಟ್ಟ ವಿಚಾರ, ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

ದೊಡ್ಡ ಪ್ರಮಾಣದಲ್ಲಿ ಕೇಂದ್ರ ‌ಮತ್ತು ರಾಜ್ಯ ಸರಕಾರದಿಂದ ಬೃಹತ್ ‌ಪ್ರಮಾಣದಲ್ಲಿ ಕೆಲಸವಾಗಿರುವುದರಿಂದ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನುದಾನ ರಹಿತ ಸಂಸ್ಥೆಗಳನ್ನು ಅನುದಾನಕ್ಕೆ ಸೇರ್ಪಡೆಯಾಗಿದ್ದು, ಹಾಸ್ಟೆಲ್ ಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ‌ನಿರ್ಮಾಣ ಮಾಡಿದ್ದು, ಹೊಸ ಶಿಕ್ಷಣ ನೀತಿ‌ ಘೋಷಣೆ ಮಾಡಿ ರಾಜ್ಯದಲ್ಲಿ ಅನುಷ್ಠಾ‌ನವಾಗಿದೆ ಎಂದರು.

ತಾಂತ್ರಿಕ ಕಾಲೇಜುಗಳು ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ‌ಮಹತ್ತರವಾದ ಆಯಾ ಭಾಷೆಯ ಆಧ್ಯತೆಯ ಮೇರೆಗೆ ಅಧ್ಯಯನ ನಡೆಸಲು ಪ್ರಧಾನಿ ಮೋದಿ ಅವರು ಸೂಚನೆ ನೀಡಿದ್ದಾರೆ‌ ಎಂದು ತಿಳಿಸಿದರು.

ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದೆ. ಎಂಜಿನಿಯರಿಂಗ್, ಐಐಟಿ, ಎಮ್ಸ್ ಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಐಐಎಂ ಸೇರಿದಂತೆ ಸಾಕಷ್ಟು ಕಾಲೇಜುಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದರು.

1ಲಕ್ಷ 4 ಸಾವಿರ ಕೋಟಿ ರೂ.ಗಳನ್ನು ಮೊದಲನೇ ಬಾರಿಗೆ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಲಾಗಿದೆ. ಸ್ವಯಂ ಉದ್ಯೋಗ ಸೃಷ್ಟಿಸಲು ಅವಕಾಶ ಸೇರಿದಂತೆ ಪದವೀಧರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆಯನ್ನು ಕೇಂದ್ರ ‌ಮತ್ತು ರಾಜ್ಯ ಸರಕಾರ ನೀಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಉಮೇಶ ಕತ್ತಿ, ಗೋವಿಂದ್ ಕಾರಜೋಳ, ಶಶಿಕಲಾ‌ ಜೋಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲಾ ಅಂಗಡಿ, ಈರಣ್ಣಾ ಕಡಾಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ಮಹಾಂತೇಶ ‌ದೊಡ್ಡಗೌಡರ,‌ ಶಿಕ್ಷಣ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ, ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಸೇರಿದಂತೆ ‌ಇನ್ನಿತರರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -