spot_img
spot_img
spot_img
19.5 C
Belagavi
Wednesday, September 28, 2022
spot_img

ಬೆಳಗಾವಿ ‌ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇಲ್ಲ : ಕಟೀಲ್ 

spot_img

ಬೆಳಗಾವಿ : ಬೆಳಗಾವಿ ‌ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇಲ್ಲ. ಅಭಿಪ್ರಾಯದಲ್ಲಿ ವ್ಯತ್ಯಾಸಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಹೇಳಿದರು.

ವಾಯುವ್ಯ ಪದವೀಧರ ಹಾಗೂ ಶಿಕ್ಷಕ ಮತಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ, ಒಂದೇ ಮನೆಯಲ್ಲಿ ಯಾವ ರೀತಿ ಭಿನ್ನ ಅಭಿಪ್ರಾಯ ಇರುತ್ತದೆಯೋ ಆ ರೀತಿ ಇರುತ್ತದೆ. ಅದನ್ನು ಎಲ್ಲರೂ ಕುಳಿತು ಬಗೆಹರಿಸಿಕೊಳ್ಳುತ್ತೇವೆ ಎಂದರು.

 

ಒಂದು ಚುನಾವಣೆಯಿಂದ ಮತ್ತೊಂದು ಚುನಾವಣೆಯಲ್ಲಿ ಕೆಲವೊಂದು ವ್ಯತ್ಯಾಸಗಳಿರುತ್ತದೆ. ಈ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ ಎಂದರು.

ರಾಜ್ಯದ ಧಾರವಾಡ, ಬೆಳಗಾವಿ ಸೇರಿದಂತೆ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಅಭ್ಯರ್ಥಿ ಹಣಮಂತ ನಿರಾಣಿ ಹಾಗೂ ಅರುಣ ‌ಶಹಾಪುರ‌ ಗೆಲವು ಸಾಧಿಸುವುದು ನಿಶ್ಚಿತ ಎಂದರು.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಗೋವಿಂದ್ ಕಾರಜೋಳ, ಶಶಿಕಲಾ ಜೊಲ್ಲೆ, ಮಾಜಿ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -