ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜಿಸಲಾಗುವುದು.
ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆ.30ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹2000 ಜಮೆ ಆಗಲಿದೆ. ಫಲಾನುಭವಿಗಳ ಮೊಬೈಲ್ಗೆ ಕೂಡಲೇ ಮೆಸೇಜ್ ಬರಲಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ, ಹಣ ಬ್ಯಾಂಕ್ಗೆ ಡೆಪಾಸಿಟ್ ಆಗಿದೆ. ಸರ್ವರ್ ಸಮಸ್ಯೆಯಾದರೆ ಹಣ ಜಮೆ ತಡವಾಗಬಹುದು ಎಂದರು.