spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ನಾಳೆ ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ಸುತ್ತ 144 ಸೆಕ್ಷನ್ ಜಾರಿ ಮತ ಏಣಿಕೆ ಕೇಂದ್ರದಲ್ಲಿ ಈ ನಿಯಮಗಳು ಕಡ್ಡಾಯ

ಬೆಳಗಾವಿ:ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಂಟಿಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.

ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ. ೨೦೦ ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದರು.

ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮೇ.೧೩ ರಂದು ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಟ್ರಾಂಗ್ ರೂಂ ಹೊರಗಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ೧೮ ವಿಧಾನಸಭಾ ಕ್ಷೇತ್ರದ ಜನರು ಬರುತ್ತಾರೆ. ಕೌಂಟಿಗ್ ಏಜೆಂಟ್, ಅಧಿಕಾರಿಗಳು ಸೇರಿದಂತೆ ಸುಮಾರು ೫ ಸಾವಿರ ಜನ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ನಗರ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ನಾಳೆ ಬೆಳಗ್ಗೆ ೫ ಗಂಟೆಯಿಂದ ಪೊಲೀಸ್ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಸುತ್ತ ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಸುಮಾರು ೧,೫೦೦ ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -