ಈ ಭಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಪ್ರಕಟ ಮಾಡಿದೆ. ಈಗಾಗಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಈ ಬಾರಿ 68 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ ಸೇರಿ ಕರ್ನಾಟಕ ಸಂಭ್ರಮ 50 ವರ್ಷ ಎಂಬ 10 ಪ್ರಶಸ್ತಿ ನೀಡಲು ನಿರ್ಧರಿಸಿದೆ.
ರಂಗಭೂಮಿ ಕ್ಷೇತ್ರದ ಆರು ಕಲಾವಿದರಿಗೆ ರಾಜ್ಯೊತ್ಸವ ಪ್ರಶಸ್ತಿ ನೀಡಲಾಗಿದ್ದು, ಎ.ಜಿ. ಚಿದಂಬರ ರಾವ್ ಜಂಬೆ ಪಿ. ಗಂಗಾಧರ ಸ್ವಾಮಿ, ಹೆಚ್.ಬಿ.ಸರೋಜಮ್ಮ, ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ ಹಾಗೂ ಪಿ.ತಿಪ್ಪೇಸ್ವಾಮಿ ಅವರಿಗೆ ನೀಡಲು ನಿರ್ಧರಿಸಿದೆ.
ಚಲನಚಿತ್ರ ಕ್ಷೇತ್ರದಲ್ಲಿ ಇಬ್ಬರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಕಟವಾಗಿದೆ. ಡಿಂಗ್ರಿ ನಾಗರಾಜ್ ಮತ್ತು ಬಿ.ಜನಾರ್ಧನ್ (ಬ್ಯಾಂಕ್ ಜನಾರ್ಧನ್) ಅವರಿಗೆ ಪ್ರಶಸ್ತಿ ದೊರೆತಿದೆ.
ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ ಹಾಗೂ ಜಿ.ನಾಗರಾಜುಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಅದರಂತೆ 10 ಸಂಘ ಸಂಸ್ಥೆಗಳು ಸೇರಿ 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆಯಲಿದೆ. ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು, ‘ಹುಸೇನಾಬಿ ಬುಡೆನ್ ಸಾಬ್ ಸಿದ್ಧಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಚೌಡಮ್ಮ, ಹೆಚ್.ಕೆ.ಕಾರಮಂಚಪ್ಪ, ವಿಭೂತಿ ಗುಂಡಪ್ಪಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.