ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ್ದಾರೆ. ನಗರದಲ್ಲಿ ಬಸ್ ಸಮಸ್ಯೆ, ಟಿಟಿಎಂಸಿಯಲ್ಲಿ ಇರಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಖಾಸಗಿ ಬಸ್ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ಗಳನ್ನು ಬಿಡಲು ನಿರ್ಧರಿಸಿದ್ದೇವೆ. ಶಾಸಕ ಎಸ್.ಟಿ.ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ ಎಂದು ಹೇಳಿದ್ದಾರೆ.