ಗದಗ : ಬೈಕ್ ಹಾಗೂ ಬೊಲೆರೊ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೊಲೆರೊ ಸುಟ್ಟು ಕರಕಲಾದರೆ ಬೈಕ್‌ನಲ್ಲಿದ್ದ ಇಬ್ಬರೂ ಮೃತಪಟ್ಟ ಘಟನೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಬೈಕ್ ಉರುಳಿ ಬಿದ್ದಿದೆ.ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ನಡುವೆ ಅಪಘಾತಕ್ಕೆ ಒಳಗಾದ ಬೊಲೆರೊ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಳಕ್ಕೆ ಜಿಗಿದ ಹಿನ್ನೆಲೆಯಲ್ಲಿ ಜೀವಾಪಾಯದಿಂದ ಪಾರಾದರು. ಅದರೆ, ಅವರೆಲ್ಲರೂ ಅಲ್ಲಿಂದ ಪರಾಗಿಯಾಗಿದ್ದಾರೆ.ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.