spot_img
spot_img
spot_img
18 C
Belagavi
Thursday, September 29, 2022
spot_img

ಫೆ.28 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ಫೆ.28 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆ 3,972 ಕೋಟಿ ಕಾಮಗಾರಿಯ ಶಂಕು ಸ್ಥಾಪನೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಗಮಿಸಲಿದ್ದಾರೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.

ಗುರುವಾರ ಕಾಡಾ ಕಚೇರಿಯ ಸಭಾಂಗಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬೆಳಗಾವಿಯಿಂದ ಸಂಕೇಶ್ವರಕ್ಕೆ ಆರು ಲೈನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶಂಕು ಸ್ಥಾಪನೆಗೆ ಆಗಮಿಸಲಿರುವ ಕೇಂದ್ರ ‌ಸಚಿವ ನಿತಿನ್ ಗಡ್ಕರ್ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಚಿವ ಸಿ.ಸಿ.ಪಾಟೀಲ ಆಗಮಿಸಲಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವೆಚ್ಚ ಒಟ್ಟು 3,972 ಕೋಟಿ ರೂ. ವೆಚ್ಚದಲ್ಲಿ ಸುಮಾರು 238 ಕಿಮೀ ಆರು ಲೈನಿನ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಕಾಮಗಾರಿಗೆ ಚಾಲನೆ ನೀಡಲು ನಿತಿನ್ ಗಡ್ಕರಿ ಅವರೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.ಈ‌ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -