ಬಳ್ಳಾರಿ : ನಗರದ ಜಿಲ್ಲಾ ಕ್ರೀಡಾಂಗಣದ ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ.ಪುನೀತ್ ರಾಜಕುಮಾರ್ ಅವರ ಪುತ್ಥಳಿಗೆ ರಾಜ್ ಕುಮಾರ್ ಕುಟುಂಬ ಮತ್ತು ಸಚಿವ ಬಿ.ಶ್ರೀರಾಮುಲು ಅವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಪಾಲಿಕೆ ಆಯುಕ್ತ ಜಿ.ರುದ್ರೇಶ್ ಸೇರಿದಂತೆ ಇತರರು ಇದ್ದರು.