ಬೆಳಗಾವಿ: ವೀರ್ ಸಾವರ್ಕರ್ ಫೋಟೋ ಬಳಕೆ ವಿಚಾರ ಗಲಾಟೆ, ಹೋರಾಟಕ್ಕೆ ಕಾರಣವಾಗಿತ್ತು. ಅಲ್ಲದೆ ಇತ್ತೀಚೆಗೆ ಬಿಜೆಪಿ ಸರ್ಕಾರ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅನಾವರಣ ಮಾಡಿತ್ತು.
ಈ ಬಗ್ಗೆ ಪರೋಕ್ಷವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಸದ್ಯ ಈಗ ಹಿಂಡಲಗಾ ಜೈಲಿನಲ್ಲಿಯೂ ಕೂಡ ಸಾವರ್ಕರ್ ಭಾವಚಿತ್ರವನ್ನು ಅಳವಡಿಕೆ ಮಾಡಲಾಗಿದೆ.
ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದಾರೆ.
ಇನ್ನು ವೀರ್ ಸಾವರ್ಕರ್ ಬೆಳಗಾವಿ ಹಿಂಡಲಗಾ ಜೈಲಲ್ಲಿ 100 ದಿನ ವಿಚಾರಣಾಧೀನ ಕೈದಿಯಾಗಿ ಸೆರೆವಾಸದಲ್ಲಿದ್ದರು. 1950ರ ಜುಲೈ 13ರಂದು ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆ ಆಗಿದ್ದರು.