Ad imageAd image

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ

ratnakar
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಗೀಶ್ವರ್ ಅವರು ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಹೇಳಿದ್ದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದ್ದೇ ಆದ ಹಿಡಿತ, ಬೆಂಬಲ ಇದೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ ಇದು. ಅಲ್ಲಿ ಕುಮಾರಸ್ವಾಮಿ ಅವರು ಆಯ್ಕೆ ಆಗಿದ್ದರು. ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿವರಿಸಿದರು.

ಬಿಜೆಪಿ- ಜೆಡಿಎಸ್  ಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದೇವೆ. ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸಮಿತಿ ರಚಿಸಿ ಅಭಿಪ್ರಾಯ ಪಡೆದಿದ್ದೇವೆ. ಅಶ್ವಥ್ ನಾರಾಯಣ್ ಅವರ ಸಮಿತಿಯ ವರದಿ ಬಗ್ಗೆ ಮಾಹಿತಿ ಇಲ್ಲ. ನಾನು ಕೂಡ ಅಶ್ವಥ್ ನಾರಾಯಣ್ ಜೊತೆ ಚರ್ಚೆ ಮಾಡುವೆ. ವರಿಷ್ಠರ ಗಮನಕ್ಕೆ ತರುತ್ತೇನೆ ಎಂದರು.

ಬೆಳಗಾವಿಯಲ್ಲಿ ಭಿನ್ನರ ಗೌಪ್ಯ ಸಭೆ ಬಗ್ಗೆ ಮಾತನಾಡಿ, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು ಸತತವಾಗಿ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ಶಕ್ತಿ ಸಿಗುವುದಾದರೆ ಕೆಲವರು ಮಾಡಬಯಸಿದ ಪಾದಯಾತ್ರೆಗೆ ವರಿಷ್ಠರು ಸಮ್ಮತಿ ಕೊಡುತ್ತಾರೆ. ನಮ್ಮದು ಈ ವಿಚಾರಕ್ಕೆ ಯಾವುದೇ ರೀತಿಯ ತಕರಾರಿಲ್ಲ. ಕೇಂದ್ರದ ವರಿಷ್ಠರ ಭೇಟಿಯೂ ಪಕ್ಷದ ಸಂಘಟನೆಗೆ ಲಾಭ ತರಬೇಕು ಎಂಬ ಸದುದ್ದೇಶವನ್ನು ಹೊಂದಿರಲಿ ಎಂದು ಆಶಿಸಿದರು.

ಜಲ ಸಂಪನ್ಮೂಲ ಸಚಿವರು ಸಂಪನ್ಮೂಲದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡ ಹಾಗಿದೆ. ಜಲ, ಜನ, ರೈತರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಅವರು ಟೀಕಿಸಿದರು. ಪ್ರಾಣ ಕಳೆದುಕೊಂಡ ಪಿಎಸ್‌ಐ ಪರಶುರಾಮ್ ಅವರ ಕುಟುಂಬಕ್ಕೆ ಪರಿಹಾರ ಕೊಟ್ಟಿಲ್ಲ. ರಾಜ್ಯ ಸರ್ಕಾರದ ಆದ್ಯತೆ ಏನೆಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article