spot_img
spot_img
spot_img
21.1 C
Belagavi
Friday, September 30, 2022
spot_img

ಕಂದಾಯ ಸಚಿವ ಆರ್.ಅಶೋಕ’ರಿಂದ ವಡಗಾಂವ(ದೆ) ನಲ್ಲಿ 21 ಕ್ಕೆ ಗ್ರಾಮ ವಾಸ್ತವ್ಯ

spot_img

ವರದಿ: ಪರಮೇಶ.ಡಿ.ವಿಳಸಪೂರೆ

ಬೀದರ: ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ (ದೆ) ಗ್ರಾಮಕ್ಕೆ ಶುಕ್ರವಾರ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಭೇಟಿ ನೀಡಿ, ಕಂದಾಯ ಸಚಿವರಾದ ಆರ್. ಅಶೋಕ ಅವರು ಮೇ 21ರಂದು ಗ್ರಾಮ ವಾಸ್ತವ್ಯ ಮಾಡಲಿರುವ ಸ್ಥಳ ಪರಿಶೀಲನೆ ಮಾಡಿದರು.
ಇದೇ ವೇಳೆ ಅಧಿಕಾರಿಗಳೊಂದಿಗೆ‌ ಎರಡನೇ ಸಭೆ ನಡೆಸಿ ಗ್ರಾಮ ವಾಸ್ತವ್ಯದ ತಯಾರಿ ಕುರಿತು ಮಾಹಿತಿ ಪಡೆದ ಸಚಿವರು, ಕಾರ್ಯಕ್ರಮ ಹೇಗಿರಬೇಕು ಎನ್ನುವ ಬಗ್ಗೆ ಗ್ರಾಮಸ್ಥರಿಂದಲೂ ಸಲಹೆಗಳನ್ನು ಪಡೆದರು.

ಈ ಭಾಗದ ಗ್ರಾಮಸ್ಥರ ಸಮಸ್ಯೆಗಳನ್ನು‌ಆಲಿಸಿ, ಜನತೆಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಕಂದಾಯ ಸಚಿವರೇ ಖುದ್ದಾಗಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಗ್ರಾಮಸ್ಥರ ಸಹಕಾರ ಸಾಕಷ್ಟು ಅಗತ್ಯವಿರುತ್ತದೆ. ತಮ್ಮ ಗ್ರಾಮದ ಅಭಿವೃದ್ಧಿ ಹಿತದೃಷ್ಠಿಯಿಂದ ಸ್ಥಳೀಯರು ಅಗತ್ಯ ಸಹಕಾರ ನೀಡಬೇಕೆಂದು ಸಚಿವರು ಕೋರಿದರು.

ತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮಕರ್ತವ್ಯಗಳನ್ನು
ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು. ಅಧಿಕಾರಿಗಳು ರೂಪುರೇಷೆಯನ್ನು ವಿವರಿಸಿ, ಮೇ 21ರ ಬೆಳಗ್ಗೆ ಗ್ರಾಮದಲ್ಲಿನ ಬಸವೇಶ್ವರ ಹಾಗೂ
ಡಾ.ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಲಾಗುತ್ತದೆ. ಗ್ರಾಮದಲ್ಲಿ ಕಳಸ ಹೊತ್ತ ಮಹಿಳೆಯರೊಂದಿಗೆ ಭವ್ಯ ಕಾರ್ಯಕ್ರಮದ ಮೆರವಣಿಗೆ ನಡೆಯಲಿದೆ. ಕೋಲಾಟ, ಡೊಳ್ಳು ಕಲಾ ತಂಡಗಳು ಇರಲಿವೆ. ಬಳಿಕ ಕಂದಾಯ ಸಚಿವರು ವೇದಿಕೆಗೆ ಆಗಮಿಸುವರು. ರಾತ್ರಿ ಬಿಸಿಎಂ ವಸತಿ ನಿಲಯದಲ್ಲಿ ವಾಸ್ತವ್ಯ ಕೈಗೊಳ್ಳುವರು. ಕಾರ್ಯಕ್ರಮದಲ್ಲಿ ಕನಿಷ್ಠ 20 ಸಾವಿರ ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಆಹಾರ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಮಳಿಗೆಗಳನ್ನು ಅಳವಡಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಲಾಗಿದೆ. ಇದರ ಅನುಷ್ಠಾನ ಅಚ್ಚುಕಟ್ಟಾಗಿ ಅಗಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅವರು ಸೂಚಿಸಿದರು.

ಗ್ರಾಪಂ ಅಧ್ಯಕ್ಷರಾದ ತ್ರೀಶುಲಾಬಾಯಿ ಝರೇಪ್ಪಾ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಓ ಜಹೀರಾ ನಸೀಮ್, ಸಹಾಯಕ ಆಯುಕ್ತರಾದ ನಯೀಮ್ ಮೋಯಿನ್, ತಹಶೀಲ್ದಾರ ಅರುಣಕುಮಾರ ಕುಲಕರ್ಣಿ,ತಾಲೂಕ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ರಾಜ್ಯ ಪ್ರಾಣಿ ಕಲ್ಯಾಣಮಂಡಳಿ ಸದಸ್ಯರಾದ ಬಂಡೆಪ್ಪ ಕಂಟೆ, ಪಶು ವಿವಿಯ ಆಡಳಿತ ಮಂಡಳಿ ಸದಸ್ಯ ವಸಂತ ವಕೀಲ್, ಮುಖಂಡರಾದ ರಾಮಶೆಟ್ಟಿ ಪಾಳೆ, ಮಲ್ಲಪ್ಪ ನೇಳಗೆ, ಪ್ರಕಾಶ ಮೇತ್ರೆ, ಪ್ರಕಾಶ ಜೀರ್ಗೆ, ಸಂದೀಪ ಪಾಟೀಲ ಮಹಾರಾಜವಾಡಿ, ಸಂಜು ರಾಠೋಡ್, ಧಾರಾಸಿಂಗ್ ಪವಾರ ಹಾಗೂ ಶಂಕರ ರಾಠೋಡ ಸೇರಿದಂತೆ ಇತರರಿದ್ದರು.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -