ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ.
ಗಂಗೊಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಮತ್ತು ಎಸ್ಡಿಪಿಐ ಮೈತ್ರಿ ಪಕ್ಷದ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದದದರೇ, ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ ಸ್ವೀಕಾರ ವೇಳೆ ಎಸ್ಡಿಪಿಐ ಮುಖಂಡರು ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಮಾಡಿಸಿದ್ದಾರೆ.
ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಾರ್ಥನೆ ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೌಲ್ವಿ ಪಾರ್ಥನೆ ಸಲ್ಲಿಸಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಎಚ್ಚರ ಹಿಂದೂ ಎಚ್ಚರ ಎಂದಿವೆ.