spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿ ಪ್ರತಿಭಟನೆ: ವಾಟಾಳ್​ ನಾಗರಾಜ

ಬೆಂಗಳೂರು: ಪೊಲೀಸ್ ಭದ್ರತೆ ನಿಯೋಜಿಸಿ ಕರ್ನಾಟಕ ಬಂದ್​ ಅನ್ನು​​ ಹತ್ತಿಕ್ಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಕಾವೇರಿ ನೀರಿಗಾಗಿ ನಾವು ಕರೆ ನೀಡಿರುವ ಬಂದ್​​ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಬಂದ್​ಗೆ ಸಹಕಾರ ನೀಡಿದ ರಾಜ್ಯದ ಜನತೆ ಧನ್ಯವಾದ ತಿಳಿಸುತ್ತೇನೆ. ಪೊಲೀಸರು ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಗೂಂಡಾಗಿರಿ, ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಶಾಂತಿಯುತವಾಗಿ ಪ್ರತಿಭಟನೆ, ಮೆರವಣಿಗೆ ಮಾಡಿದರೇ ತಪ್ಪಾ? ಟೌನ್​​​ಹಾಲ್​ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ದೌರ್ಜನ್ಯವೆಸಗಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಕಪ್ಪು ಬಟ್ಟೆ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ.

ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -