ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮುಂದುವರಿಸಲ್ಲ. ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರಿಸುತ್ತೇವೆ. ಸದ್ಯದಲ್ಲೇ ಸಮಿತಿ ರಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ ಬಗ್ಗೆ ಸಿಎಂ ಸಭೆ ಮಾಡಿದ್ದಾರೆ. ಸಭೆಯಲ್ಲಿ ಎನ್ಇಪಿಯ ಸಾಧಕ ಬಾಧಕ ಬಗ್ಗೆಯೂ ಚರ್ಚಿಸಿದ್ದಾರೆ. ರಾಜ್ಯದ ಶಿಕ್ಷಣ ಮಟ್ಟ ಉತ್ತಮವಾಗಿದೆ ಎಂದು ವಿಸಿಗಳು ಹೇಳಿದ್ದಾರೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿ ಹಲವೆಡೆ NEP ಜಾರಿ ಮಾಡಿಲ್ಲ. ಆದರೆ ಕರ್ನಾಟಕದಲ್ಲಿ ತರಾತುರಿಯಲ್ಲಿ ತರಲು ಪ್ರಯತ್ನ ಮಾಡಿದ್ದರು. ರಾಜ್ಯ ಸರ್ಕಾರ ಹೊಸ ಪಾಲಿಸಿ ತರುತ್ತೆ, ಅದಕ್ಕಾಗಿ ಸಮಿತಿ ರಚನೆ ಮಾಡಲಾಗುವುದು ಎಂದರು.