ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧಿಸಿದಂತೆ ಬಿಜೆಪಿಯ ಬಿ ಟೀಂ ಜೆಡಿಎಸ್ ಅಂತಾ ಅಧಿಕೃತವಾಗಿ ಗೊತ್ತಾಗುತ್ತಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ.
ವಿಧಾನಸಭೆಯಲ್ಲಿ ಸ್ವಂತ ಬಲದಿಂದ ಹೇಗೆ 135 ಸ್ಥಾನ ಗೆದ್ದಿದ್ದೇವೆ. ಅದೇ ರೀತಿ ಲೋಕಸಭೆಯಲ್ಲೂ ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ. ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ, ಇದು ನೂರಕ್ಕೆ ನೂರರಷ್ಟು ಸತ್ಯ. ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ಗೆ ಅನುಕೂಲವಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.