ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಈ ಮೈತ್ರಿ ಬಿಜೆಪಿಗೆ ಬೇಕಿತ್ತಾ ಅಥವಾ ಜೆಡಿಎಸ್ಗೆ ಬೇಕಿತ್ತಾ? ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನೆ ಮಾಡಿದ್ದಾರೆ.
ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಅನ್ನೋದು ತಪ್ಪು. ಎಲ್ಲಾ ಜಿಲ್ಲೆಯವರು ಸಂಪರ್ಕದಲ್ಲಿದ್ದಾರೆ. ಜನತಾದಳ ಪಕ್ಷದ ಸಿದ್ಧಾಂತವನ್ನು ಬಿಜೆಪಿಯವರು ಒಪ್ಪಿದ್ದಾರಾ? ಬಿಜೆಪಿ ಸಿದ್ಧಾಂತವನ್ನ JDS ಒಪ್ಪಿದೆಯಾ ಎಂಬುದನ್ನು ತಿಳಿಸಬೇಕು. ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮಗೆ ಶಕ್ತಿ ಇಲ್ಲ. ಈ ಮೈತ್ರಿ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗುತ್ತಿದೆ. ದೇವೇಗೌಡರು ಎಲ್ಲರನ್ನೂ ಕರೆದು ಅಭಿಪ್ರಾಯ ಪಡೆಯುವುದು ಸೂಕ್ತ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....