ಬಿಜೆಪಿ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದರು. ಈಗ ಜನತಾ ದಳ ಉಳಿವಿಗಾಗಿ ಬಿಜೆಪಿ ಜೊತೆ ಸೇರುತ್ತಿದ್ದೇವೆ ಅಂತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಅಧಿಕಾರ ಇರಲಿ ಇಲ್ಲದಿರಲಿ, ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲ್ಲ. ಒಂದು ಧರ್ಮದ ಮೇಲೆ ಇನ್ನೊಂದು ಧರ್ಮ ಎತ್ತಿಕಟ್ಟೋದು ರಾಜಕಾರಣನಾ? ಜನರನ್ನು ಬಿಟ್ಟು, ಸಮಾಜ ಬಿಟ್ಟು ರಾಜಕಾರಣ ಮಾಡಲು ಆಗುವುದಿಲ್ಲ. ಜಾತ್ಯತೀತ ಪಕ್ಷ ಅಂತ ಯಾವುದಾದರು ಇದ್ದರೆ ಅದು ಕಾಂಗ್ರೆಸ್ ಪಕ್ಷ ಎಂದು ಗುಡುಗಿದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....