ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ. ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪೂರ ಪೊಲೀಸರು. ಕೋರ್ಟ್ಗೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆ ಅಗತ್ಯವಾಗಿತ್ತು.
ಈ ಹಿನ್ನೆಲೆಯಲ್ಲಿ ಈತನನ್ನು ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೋವಿಡ್ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈತ. ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ