ಬೆಂಗಳೂರು: ಬೆಳಗಾವಿಯಲ್ಲಿ (Belagavi) ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Winter Session) ದಿನಾಂಕ ನಿಗದಿಯಾಗಿದೆ.
ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ.