ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್ ವಿಚಾರ ಸಂಬಂಧ ಯತೀಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಸ್ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....