Ad imageAd image
- Advertisement - 

ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ

ratnakar
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
WhatsApp Group Join Now
Telegram Group Join Now

ಕೊಪ್ಪಳ: ಬಿಎಸ್ ಯಡಿಯೂರಪ್ಪ ಮತ್ತು ತಮ್ಮ ಬಗ್ಗೆ ಬೆಳಗಾವಿಯಲ್ಲಿ ಹಗುರವಾಗಿ ಮಾತಾಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಕಿ ಕಾರಿದ ಬೆಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಇತ್ತೀಗಷ್ಟೇ ಪಕ್ಷಕ್ಕೆ ಬಂದಿರುವ ಗೋಕಾಕ ಶಾಸಕ, ಯಡಿಯೂರಪ್ಪ ಅವರ ಬಗ್ಗೆ ಮಾತಾಡುವಾಗ ನಾಲಗೆ ಬಿಗಿಹಿಡಿಯಬೇಕು ಎಂದು ಎಚ್ಚರಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಅವರು, ಯಡಿಯೂರಪ್ಪ ಈ ನಾಡು ಕಂಡ ಅಪ್ರತಿಮ ಹೋರಾಟಗಾರ, ಕಾಲಿಗೆ ಚಕ್ರ ಕಟ್ಟಿಕೊಂಡು ಹಳ್ಳಿಹಳ್ಳಿ ಸುತ್ತುತ್ತ ಪಕ್ಷ ಸಂಘಟನೆ ಮಾಡಿದ್ದಾರೆ, ಅವರ ಬಗ್ಗೆ ಹಗುರವಾಗಿ ಮಾತಾಡಿದರೆ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗುತ್ತದೆ ಮತ್ತು ಜಾರಕಿಹೊಳಿ ಹೊರಗಡೆ ತಿರುಗಾಡುವುದು ಕಷ್ಟವಾದೀತು ಎಂದು ಹೇಳಿದರು.

 

WhatsApp Group Join Now
Telegram Group Join Now
Share This Article