ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಾ, ಅಭಿವೃದ್ಧಿಯಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿಯವರ ನಾಯಕತ್ವ ಮೆಚ್ಚಿ ಬೇರೆ ಪಕ್ಷದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ.
ಪಕ್ಷಕ್ಕೆ ಸೇರುವ ಮುಖಂಡರಿಗೆ ಅವರ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆದಿದ್ದು, ಎಲ್ಲರೊಂದಿಗೆ ಚರ್ಚಿಸಿ, ಇದನ್ನು ಮಾಡಲಾಗುತ್ತದೆ ಎಂದರು. ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು ಎಲ್ಲರನ್ನೂ ಸ್ವಾಗತಿಸುತ್ತೇನೆ ಎಂದರು.