ಬೆಳಗಾವಿಯ ಸುವರ್ಣಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದೆ.
ಆಯುಷ್ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆಯ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೈರಾಗಿದ್ದಾರೆ.