ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರು ಸಾವನ್ನಪ್ಪಿದರು.
ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ನಾಳೆ ಮಧ್ಯಾಹ್ನ ಸ್ವಗ್ರಾಮ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.