ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಶೇ 10ರಷ್ಟು ಕುಸಿತ

May 9, 2024 - 14:22
 29
Google  News Join WhatsApp Join Telegram View ePaper

ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಶೇ 10ರಷ್ಟು ಕುಸಿತ

Panchayat Swaraj Samachar News Desk.

ಬೆಂಗಳೂರು, ಮೇ 9: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ನಂಬರ್ಗೂ ಸಹ ಫಲಿತಾಂಶದ ವಿವರದ ಎಸ್ಎಂಎಸ್ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.

Google News Join Facebook Live 24/7 Help Desk

Tags: