ಏ.20ಕ್ಕೆ ಚಿಕ್ಕಬಳ್ಳಾಪುರಕ್ಕೆ ಮೋದಿ

Apr 18, 2024 - 13:20
 28
Google  News Join WhatsApp Join Telegram Live

ಏ.20ಕ್ಕೆ ಚಿಕ್ಕಬಳ್ಳಾಪುರಕ್ಕೆ ಮೋದಿ

Panchayat Swaraj Samachar News Desk.

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಟಾರ್ ನಾಯಕರು ಹಾಗೂ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಏ.20ರಂದು ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಏ.20ರಂದು ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದು, ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. 3:30ರಿಂದ 4:30ರವರೆಗೂ ಚಿಕ್ಕಬಳ್ಳಾಪುರದಲ್ಲಿ ಇರಲಿದ್ದು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿಗಳ ಪರ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಬಿ.ವೈ ವಿಜಯೇಂದ್ರ, ಆರ್.ಅಶೋಕ್ ಸಾಥ್ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಅಗಲಗುರ್ಕಿ ಬಳಿ ಸಮಾವೇಶ ನಡೆಯಲಿದೆ. 

Google News Join Facebook Live 24/7 Help Desk

Tags: