ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Apr 26, 2024 - 11:59
 20
Google  News Join WhatsApp Join Telegram Live

ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Panchayat Swaraj Samachar News Desk.

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.

ಮೋದಿ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರು ಹತಾಶೆಯಿಂದ ಭಾಷಣ ಮಾಡುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಾಗಿ ಮಾಡುವ ಭಾಷಣವಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ಭಾಷಣವಾಗಿದೆ. ಸೋಲುತ್ತೀವಿ ಅನ್ನೋ ಭಯ ಅವರಿಗರಬೇಕು ಎಂದರು. 

Google News Join Facebook Live 24/7 Help Desk

Tags: