ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಪಾಳ ಮೋಕ್ಷ ಮಾಡಿದೆ: ಶಾಸಕ ರಾಜು ಆಸಿಫ್ ಸೆಟ್

Apr 23, 2024 - 20:23
 34
Google  News Join WhatsApp Join Telegram Live

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಪಾಳ ಮೋಕ್ಷ ಮಾಡಿದೆ: ಶಾಸಕ ರಾಜು ಆಸಿಫ್ ಸೆಟ್

Panchayat Swaraj Samachar News Desk.

ಬೆಳಗಾವಿ: ಕೇಂದ್ರ ಮತ್ತು ರಾಜ್ಯದ ನಡುವೆ ನಡೆಯುತ್ತಿರುವ ಬರ ಪರಿಹಾರದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಹೊರಬಂದ ತಕ್ಷಣ ರಾಜಕೀಯ ಪ್ರತಿಕ್ರಿಯೆಗಳು ಹೊರಬರುತ್ತಿವೆ.

ಅದರಂತೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ರಾಜು ಆಸಿಫ್ ಸೆಟ್ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯ ಸರ್ಕಾರಕ್ಕೆ ಸತ್ಯ ಹಾಗೂ ನ್ಯಾಯದ ಪರವಾಗಿರುವ ತೀರ್ಪು ಇದಾಗಿದೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಜನರಿಗೆ ತಿಳಿಯುತ್ತಿದೆ.

 ಸುಪ್ರೀಂ ಕೋರ್ಟಿನ ತೀರ್ಪು ಕೇಂದ್ರ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದಂತಾಗಿದೆ. ರಾಜ್ಯ ಸರ್ಕಾರದ ಬರ ಪರಿಹಾರ ಬರಬೇಕೆಂದು ಅನೇಕ ಬಾರಿ ರಾಜ್ಯ ಸರ್ಕಾರ ಹೋರಾಟ ಮಾಡಿತ್ತು ,ಮತ್ತು ದಿಲ್ಲಿಗೆ ಹೋಗಿ ಹೋರಾಟ ಮಾಡಿದ್ದೆವು. ಈಗ ಅದರ ಪ್ರತಿಫಲ ನಮಗೆ ಸಿಕ್ಕಿದೆ. ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಮುಂದಿನ ಸೋಮವಾರದ ಒಳಗೆ ಬರ ಪರಿಹಾರ ಕರ್ನಾಟಕ ರಾಜ್ಯಕ್ಕೆ ನೀಡಬೇಕೆಂದು ಆದೇಶವಾಗಿರೋದು ಸ್ವಾಗತ ಅರ್ಹ.

 ಈ ಒಕ್ಕೂಟ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಬಲಗೊಳಿಸಬೇಕಾಗಿದೆ. ಆದರೆ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯ ರಾಜ್ಯಗಳ ನಡುವೆ ಧರ್ಮ ಧರ್ಮಗಳ ನಡುವೆ ದ್ವೇಷ ಭಾವನೆ ಹುಟ್ಟಿಸುವುದೇ ಬಿಜೆಪಿಯ ಕೆಲಸ ಆಗಿದೆ ಎಂದರು.

ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವಳಿಗೆ ನ್ಯಾಯ ಸಿಗಬೇಕು ಮತ್ತು ಅವರ ಕೊಲೆ ಮಾಡಿರುವ ಕೊಲೆಗಾರರಿಗೆ ತಕ್ಕ ಶಿಕ್ಷೆ ಆಗಬೇಕೆಂದು ನಾವು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡ್ತಾ ಇದ್ದೇವೆ, ನೇಹಾ ಹಿರೇಮಠ್ ಅವರ ಆತ್ಮಕ್ಕೆ ಶಾಂತಿ ಸಿಗಬೇಕು. ಕಾಂಗ್ರೆಸ್ ನಾಯಕರುಗಳು ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ನಡೆದು ಬಂದರು.

 ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ರಾಜು ಆಸಿಫ್ ಸೆಟ, ಕಿತ್ತೂರು ಶಾಸಕರಾದ ಬಾಬಾ ಸಾಹೇಬ್ ಪಾಟೀಲ್ ,ವಿಧಾನಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ವಿನಯ ನವಲಗಟ್ಟಿ 

ಪ್ರಧಾನ ಕಾರ್ಯದರ್ಶಿಗಳು ಪ್ರದೀಪ್ ಎಂ ಜಿ,ಪ್ರಚಾರ ಸಮಿತಿಯ ಅಧ್ಯಕ್ಷರಾದ ರಾಜ ಸಲೀಂ, ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ್ ಕೆಪಿಸಿಸಿ ಸದಸ್ಯರಾದ ಆಯುಷ್ಯ ಸನದಿ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿ ಕಾರ್ಯಕರ್ತರು ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: