ಜನತಾ ಪರಿವಾರ ಅಂದರೆ ಕಾಂಗ್ರೆಸ್ ವಿರೋಧಿ: ಜಗದೀಶ್ ಶೆಟ್ಟರ್

Apr 4, 2024 - 15:31
Apr 4, 2024 - 15:47
 51
Google  News Join WhatsApp Join Telegram Live

ಜನತಾ ಪರಿವಾರ ಅಂದರೆ ಕಾಂಗ್ರೆಸ್ ವಿರೋಧಿ: ಜಗದೀಶ್ ಶೆಟ್ಟರ್

Panchayat Swaraj Samachar News Desk.

ಬಿಜೆಪಿ ಜೆಡಿಎಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮನ್ವಯ ಸಭೆ ಬೆಳಗಾವಿ ನಗರದ ಹೋಟೆಲ ಒಂದರಲ್ಲಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಮತದಾರರ ಬಳಿ ಹೋಗಿ ಎನ್.ಡಿ.ಎ ಮೈತ್ರಿಕೂಟದ ಹಾಗೂ ಪ್ರಧಾನಿ ಮೋದಿ ಅವರ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಜನರ ತಿಳಿಸುವುದು ಹಾಗೂ ಚುನಾವಣಾ ಪ್ರಚಾರ ಕಾರ್ಯಕ್ರಮಗಳು ಒಟ್ಟಾಗಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಬಿಜೆಪಿ ಹಾಗೂ ಜೆಡಿಎಸ್ ಸಹಜ ಒಂದು ಮೈತ್ರಿ ಪಕ್ಷಗಳಾಗಿದ್ದಾವೆ ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೇಗೌಡರು ಸುದೀರ್ಘ ಆಡಳಿತ ಅನುಭವ ಮತ್ತು ರಾಜಕೀಯ ಮಾರ್ಗದರ್ಶನ ನಮಗೆ ದೊರೆಯುತ್ತಿರುವುದು ನಮ್ಮ ಭಾಗ್ಯ . ವಿಶೇಷವಾಗಿ ನೀರಾವರಿಗೆ ಸಂಬಂಧ ಪಟ್ಟಂತ ಅಗಾಧವಾದ ಜ್ಞಾನ ಮತ್ತು ಅನುಭವ ಹೊಂದಿರುವ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ದಲ್ಲಿ ನಾನು ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಕುಮಾರಸ್ವಾಮಿ ಅವರ ಜೊತೆ ಉತ್ತಮ ಸಂಬಂಧವನ್ನು ಮತ್ತು ಮೈತ್ರಿ ವನ್ನು ಹೊಂದಿದ್ದೇನೆ ಜನತಾ ಪರಿವಾರ ಕಾಂಗ್ರೆಸ್ ಪಕ್ಷವನ್ನು ವಿರೋಧಿಸುತ್ತಲೇ ಬಂದಿದೆ.

 ನಾವು ನೋಡಿದಂತೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಜನತಾ ಪರಿವಾರದ ಅನೇಕ ನಾಯಕರುಗಳು ಕಾಂಗ್ರೆಸ್ ವನ್ನು ವಿರೋಧಿಸಿ ಕಾಂಗ್ರೆಸ್ಸೇತರ ಸರ್ಕಾರ ರಚನೆ ಮಾಡಲು ಪ್ರಯತ್ನಪಟ್ಟು ಯಶಸ್ವಿಯಾಗಿದ್ದರು. 

ಎನ್.ಡಿ.ಎ ಮೈತ್ರಿಕೂಟ ಸೇರಿರುವ ಜೆಡಿಎಸ್ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆ ಡಿ ಎಸ ಜೊತೆ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ .ಜಗದೀಶ್ ಶೆಟ್ಟರ್ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದರು.

 ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಅನಿಲ್ ಬೆನಕೆ ಅವರು ಮಾತನಾಡಿ ಈ ಮೈತ್ರಿ ನಿನ್ನೆ ಮೊನ್ನೆ ಮೈತ್ರಿ ಅಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಎಷ್ಟು ಗೌರವ ನೀಡುತ್ತಾರೆಂದರೆ ನಾವು ಕಣ್ಣಾರೆ ನೋಡಿದ್ದೇವೆ. ಅವರ ಪ್ರತಿಯೊಂದು ಸಲಹೆಗಳನ್ನು ಆಲಸಿ ಕಾರ್ಯರೂಪಕ್ಕೆ ತರಲು ಪ್ರಯತ್ನಿ ಪಡುತ್ತಾರೆ, ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗಿಂತ ಹೆಚ್ಚಿನ ಮತಗಳಿಂದ ಜಗದೀಶ್ ಶೆಟ್ಟರ್ ಅವರನ್ನು ಆರಿಸಿ ಬೆಳಗಾವಿಯಿಂದ ದಿಲ್ಲಿಗೆ ಕಳಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .

ಈ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಧಿಕೃತ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ, ರಾಜ್ಯಸಭಾ ಸದಸ್ಯರಾದ ವೀರಣ್ಣ ಕಡಾಡಿ ,ಬೆಳಗಾವಿ ಮಹಾಪೌರಾದ ಸವಿತಾ ಕಾಂಬಳೆ ,ಉಪ ಮಹಾಪೌರಾದ ಆನಂದ್ ಚೌವಾಣ್, ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರಾದ ಎಂಎಸ್ ಜಿರಲಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಅನಿಲ ಬೆನಕೆ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬೆಳಗಾವಿ ಬಿಜೆಪಿ ಗ್ರಾಮೀಣ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಬೆಳಗಾವಿ ಮಹಾನಗರ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ವಿಶ್ವನಾಥ್ ಪಾಟೀಲ್, ಜೆಡಿಎಸ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶಂಕರ್ ಮಳಗಲಿ, ಬಿಜೆಪಿ ಹಾಗೂ ಜೆಡಿಎಸ್ ಪದಾಧಿಕಾರಿಗಳು ಹಾಗೂ ಬಿಜೆಪಿ ಮಾಧ್ಯಮ ವಕ್ತಾರಾದ ಹನುಮಂತ ಕೊಂಗಾಳಿ ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: