ಧರ್ಮ ಯುದ್ಧದ ಮೊದಲು ದೇವರ ದರ್ಶನ ಪಡೆಯುತ್ತಿದ್ದೇನೆ: ಡಿಕೆಶಿ

Mar 27, 2024 - 11:09
 5
Google  News Join WhatsApp Join Telegram Live

ಧರ್ಮ ಯುದ್ಧದ ಮೊದಲು ದೇವರ ದರ್ಶನ ಪಡೆಯುತ್ತಿದ್ದೇನೆ: ಡಿಕೆಶಿ

Panchayat Swaraj Samachar News Desk.

ಬೆಂಗಳೂರು: ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ. ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ ಶಾರದಾಂಬೆ, ಕೊಲ್ಲೂರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಇಡಗುಂಜಿ, ಮೈಸೂರು ಕಬ್ಬಾಳ ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ದೇವರು ನಮ್ಮನ್ನು ಕೈ ಬಿಡದೆ ಒಳ್ಳೆಯದನ್ನೇ ಮಾಡಿದ್ದಾರೆ ಎಂದರು.

Google News Join Facebook Live 24/7 Help Desk

Tags: