ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ

Apr 12, 2024 - 13:14
 58
Google  News Join WhatsApp Join Telegram Live

ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ

Panchayat Swaraj Samachar News Desk.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

MTP ಕಾಯ್ದೆ ಪರವಾನಗೆ ಪಡೆಯದೇ ಬೇಕಾಬಿಟ್ಟಿಯಾಗಿ ಗರ್ಭಪಾತ ಮಾಡಿಸಲಾಗಿತ್ತು. ಈ ಹಿನ್ನಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಆಸರೆ ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.

 ನೆಲಮಂಗಲ ಟೌನ್ ಠಾಣೆಯಲ್ಲಿ ಡಾ.ರವಿಕುಮಾರ್ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು. ಜೊತೆಗೆ ಐಪಿಸಿ ಸೆಕ್ಷನ್‌ 312, 313, 315, 316ರಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಪುರುಷ ಮಹಿಳೆಯರ ಸಮಾಜ ಅನುಪಾತ ಕಾಪಾಡುವ ದಷ್ಠಿಯಿಂದ ಕೇಂದ್ರ ಸರಕಾರ ಹೆರಿಗೆಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ 1994ರಲ್ಲಿ ದುರ್ಬಳಿಕೆ ಮತ್ತು ತಡೆ ಕಾಯಿದೆ ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ, ಭ್ರೂಣಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಈ ಕಾಯ್ದೆಯಲ್ಲಿ ನಿಷೇಧಿಸಿದೆ. ಇದನ್ನು ಉಲ್ಲಂಘಿಸಿದಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಜತೆಗೆ ಹತ್ತು ಸಾವಿರ ರೂ. ದಂಡ ವಿಧಿಸಲಾಗುತ್ತದೆ.

Google News Join Facebook Live 24/7 Help Desk

Tags: