ಪತಿಯ ಜೊತೆ ಹೋಗುತ್ತಿದ್ದ ಪತ್ನಿಗೆ ಪುಂಡರಿಂದ ಲೈಂಗಿಕ ಕಿರುಕುಳ

May 1, 2024 - 10:46
 27
Google  News Join WhatsApp Join Telegram View ePaper

ಪತಿಯ ಜೊತೆ ಹೋಗುತ್ತಿದ್ದ ಪತ್ನಿಗೆ ಪುಂಡರಿಂದ ಲೈಂಗಿಕ ಕಿರುಕುಳ

Panchayat Swaraj Samachar News Desk.

ಪತಿಯ ಜೊತೆ ಹೋಗುತ್ತಿದ್ದ ಪತ್ನಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಿಹಾರ ಮೂಲದ ದಂಪತಿ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಬೆನ್ನಹತ್ತಿ ಬಂದ ಮೂವರು ಪುಂಡರು, ಮಹಿಳೆಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಅಪಹರಿಸುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ಅಲ್ಲದೆ ಪುಂಡರು ಹೆಂಡತಿಯನ್ನ ಕಳಿಸುವಂತೆ ಗಂಡನಿಗೂ ಬೆದರಿಕೆ ಹಾಕಿದ್ದಾರೆ. ಕೂಡಲೆ ದಂಪತಿ ಸಹಾಯ ಕೋರಿ ಬೆಂಗಳೂರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಕರೆ ಮಾಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Google News Join Facebook Live 24/7 Help Desk

Tags: