ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

Apr 6, 2024 - 13:34
 45
Google  News Join WhatsApp Join Telegram Live

ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

Panchayat Swaraj Samachar News Desk.

ಶಿವಮೊಗ್ಗ: ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದು, ತಮ್ಮ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಅವರು, ಮೋದಿಯವರು ವಿಶ್ವ ನಾಯಕ, ಭಾರತದ ಪ್ರಧಾನಮಂತ್ರಿ ಅದಕ್ಕೆ ಫೋಟೋ ಬಳಸಿಕೊಳ್ಳುತ್ತೇನೆ ಎಂದಿದ್ದರು.

ಮೋದಿ ಭಾವಚಿತ್ರ ಬಳಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಕೆವಿಯಟ್ ಸಲ್ಲಿಸಿದ್ದು, ಭಾವಚಿತ್ರವನ್ನು ಬಳಸಿಕೊಳ್ಳುವುದನ್ನು ಕಾನೂನಾತ್ಮಕವಾಗಿ ತಡೆಯುವ ಯಾರಾದರೂ ಪ್ರಯತ್ನಿಸಿದರೆ ಅದಕ್ಕೆ ಹಿನ್ನಡೆಯಾಗಲಿದೆ ಎಂಬುದು ಅವರ ಲೆಕ್ಕಾಚಾರವಾಗಿದೆ. ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು, ಸಂವಿಧಾನದಲ್ಲಿ ಎಲ್ಲಾ ಭಾರತೀಯರು ಪ್ರಧಾನಿಯ ಭಾವಚಿತ್ರವನ್ನು ಬಳಸಿಕೊಳ್ಳಲು ಅವಕಾಶವಿದೆ.

ಈಶ್ವರಪ್ಪ ಅವರು, ಸಲ್ಲಿಸಿರುವ ಕೆವಿಯಟ್ ಅವಧಿ ಮೂರು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಚುನಾವಣೆ ಮುಗಿದಿರುತ್ತದೆ. ಯಾರು ಕೂಡ ಇದರ ವಿರುದ್ಧ ತಡೆ ತರಲು ಬರುವುದಿಲ್ಲ ಎನ್ನುವುದು ಅವರ ಯೋಚನೆ. ಇದರಿಂದ ಮೋದಿ ಭಾವಚಿತ್ರ ಬಳಸಿಕೊಳ್ಳಲು ಈಶ್ವರಪ್ಪನವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ.

Google News Join Facebook Live 24/7 Help Desk

Tags: