ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

May 2, 2024 - 17:35
 27
Google  News Join WhatsApp Join Telegram Live

ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

Panchayat Swaraj Samachar News Desk.

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ. ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅವರು ಹೇಳಿದ್ದಾರೆ.

ಚುನಾವಣೆ ವಿಚಾರವಾಗಿ, ಈ ಬಾರಿ ಕರ್ನಾಟಕದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಜನ ಬಿಜೆಪಿಯನ್ನು ಗೆಲ್ಲಿಸುತ್ತಾರೆ. 2019ರಲ್ಲಿ ಬಿಜೆಪಿ ಹೇಗೆ ಗೆದ್ದಿತ್ತೋ, ಹಾಗೆ ಈ ಬಾರಿಯೂ ಎನ್‍ಡಿಎ ಎಲ್ಲಾ ಸೀಟುಗಳನ್ನು ಗೆಲ್ಲಲಿದೆ. ಕಾಂಗ್ರೆಸ್‍ನವರು ಹತಾಶರಾಗಿ ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಬರಲು ಹೇಳಿಕೆ ಕೊಡುತ್ತಿದ್ದಾರೆ. ನಾವು ಹತ್ತು ವರ್ಷಗಳಿಂದ ಕೆಲಸ ಮಾಡಿದ್ದನ್ನು ಜನ ನೋಡಿದ್ದಾರೆ. ಜನ ನಮಗೆ ಬೆಂಬಲ ಕೊಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Google News Join Facebook Live 24/7 Help Desk

Tags: