ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

Apr 26, 2024 - 13:17
 29
Google  News Join WhatsApp Join Telegram Live

ಪ್ರಧಾನಿ ಮೋದಿಯನ್ನ ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

Panchayat Swaraj Samachar News Desk.

ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಏಪ್ರಿಲ್ 29) ವಿಚಾರಣೆ ನಡೆಸಲಿದೆ.

ವಕೀಲ ಆನಂದ್ ಎಸ್ ಜೊಂಧಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಆರು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಏ.9 ರಂದು ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನ ಮಂತ್ರಿಯವರ ಭಾಷಣಗಳು ಮತದಾರರಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿವೆ. ಪ್ರಧಾನಿ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುತ್ತವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951 ರ ಅಡಿಯಲ್ಲಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದೆ‌.

Google News Join Facebook Live 24/7 Help Desk

Tags: