ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಧರ್ಮದ ತಾಯಂದಿರು ಗಂಡ-ಮಕ್ಕಳನ್ನ ಕಳೆದುಕೊಳ್ತಾರೆ: ಯತೀಂದ್ರ

Apr 22, 2024 - 19:42
 23
Google  News Join WhatsApp Join Telegram Live

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಧರ್ಮದ ತಾಯಂದಿರು ಗಂಡ-ಮಕ್ಕಳನ್ನ ಕಳೆದುಕೊಳ್ತಾರೆ: ಯತೀಂದ್ರ

Panchayat Swaraj Samachar News Desk.

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಏಕೆಂದರೆ ಈ ದೇಶದಲ್ಲಿ ಬಿಜೆಪಿ ಕೋಮುಗಲಭೆ, ದೊಂಬಿ ಗಲಾಟೆ ಸೃಷ್ಟಿ ಮಾಡಿ ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡ್ತಾರೆ. ಇಡೀ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡ್ತಾರೆ. ಮಕ್ಕಳಿಗೆ ಶಿಕ್ಷಣ ಕೊಡದೇ ಕೋಮು ಗಲಭೆಗಳಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡ್ತಾರೆ ಎಂದು ಕಿಡಿ ಕಾರಿದ್ದರೆ.

ಪ್ರಧಾನಿ ಮೋದಿ ಮತ ಕೇಳುವ ನೆಪದಲ್ಲಿ ಅತ್ಯಂತ ತುಚ್ಛವಾದ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಯಾವುದೇ ಒಬ್ಬ ಪ್ರಧಾನಿ ಇಂತಹ ಕೆಳಮಟ್ಟಕ್ಕೆ ಇಳಿಯೋದಿಲ್ಲ. ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದ್ಯೋ ಗೊತ್ತಿಲ್ಲ ವಾಗ್ದಾಳಿ ನಡೆಸಿದ್ದಾರೆ.

Google News Join Facebook Live 24/7 Help Desk

Tags: