ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನನ್ನ ಬೆಂಬಲ: ಸುಮಲತಾ ಅಂಬರೀಶ್‌

Apr 3, 2024 - 18:11
 5
Google  News Join WhatsApp Join Telegram Live

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನನ್ನ ಬೆಂಬಲ: ಸುಮಲತಾ ಅಂಬರೀಶ್‌

Panchayat Swaraj Samachar News Desk.

ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಎಂಪಿ, ಎಂಎಲ್‌ಎಗೆ ಟಿಕೆಟ್‌ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.

ಮಂಡ್ಯ ಮಣ್ಣನ್ನು ಸುಮಲತಾ ಅಂಬರೀಶ್ ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು. ಮಂಡ್ಯದ ಋಣ, ಮಂಡ್ಯ ಜನರನ್ನ ಎಂದೆಂದಿಗೂ ಬಿಡೋದಿಲ್ಲ. ಈ ಪ್ರೀತಿ ಆಶೀರ್ವಾದ ಹೀಗೆ ಇರಲಿ. ಮುಂದಿನ ದಿನಗಳಲ್ಲಿ ನನ್ನ ಎಲ್ಲಾ ಪ್ರಯತ್ನಗಳಲ್ಲೂ ಜೊತೆಯಲ್ಲಿರಿ. ಸಂಸದೆಯಾಗಿ ನಿಮಗೆ ನಾನು ಪರಿಚಯ ಆಗಲಿಲ್ಲ. ಅಂಬರೀಶ್ ಪತ್ನಿಯಾಗಿ, ಮಂಡ್ಯ ಸೊಸೆಯಾಗಿ‌ ನಿಮಗೆ ಪರಿಚಯ. ನೀವು ನನಗೆ ತಾಯಿ ಸ್ಥಾನ ಕೊಟ್ಟೀದ್ದೀರಾ. ತಾಯಿಯಿಂದ ಮಕ್ಕಳನ್ನು ದೂರ ಮಾಡಲು ಆಗಲ್ಲ ಎಂದು ನುಡಿದರು.

ನನ್ನ ಕಾರ್ಯಕರ್ತರು, ಅಭಿಮಾನಿಗಳಿಗೆ ಶಕ್ತಿ ತುಂಬಲು ಈ ನಿರ್ಧಾರಕ್ಕೆ ಬಂದಿದ್ದೇನೆ. ಪಕ್ಷೇತರವಾಗಿ ಸ್ಪರ್ಧೆ ಬೇಡ, ಕಾಂಗ್ರೆಸ್‌ಗೆ ನನ್ನ ಅವಶ್ಯಕತೆ ಇಲ್ಲ. ಪಕ್ಷೇತರ ಸಂಸದೆಯಾದರೂ 4 ಸಾವಿರ ಕೋಟಿ ಅನುದಾನ ಕೊಟ್ಟಿದ್ದು ಬಿಜೆಪಿ. ಪ್ರತಿ ವಿಷಯದಲ್ಲೂ ನನ್ನನ್ನು ವಿಶ್ವಾಸಕ್ಕೆ ಪಡೆದರು. ನಿಮ್ಮ ನಾಯಕತ್ವ ಬೇಕು ಎಂದು ಸ್ವತಃ ಪ್ರಧಾನಿ ನನಗೆ ಹೇಳಿದ್ರು. ನಾಯಕತ್ವ ಬೆಳೆಸೋ ಗುಣ ಬಿಜೆಪಿಯಲ್ಲಿದೆ. ಭಾರತವನ್ನ ಇಡೀ ಪ್ರಪಂಚ ತಿರುಗಿ ನೋಡುವಂತೆ ಮೋದಿ ಮಾಡಿದ್ದಾರೆ. ಮೋದಿ ಅವರದ್ದು ಅಭಿವೃದ್ಧಿ ಮಂತ್ರ. ಒಂದೇ ಒಂದು ಕಳಂಕ ಅವರ ಮೇಲಿಲ್ಲ. ಅವರ ನಾಯಕತ್ವದಲ್ಲಿ ಮುನ್ನಡೆಯುತ್ತೇನೆ. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಆದರೆ ಮಂಡ್ಯವನ್ನ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Google News Join Facebook Live 24/7 Help Desk

Tags: